KARNATAKA
ರಾಮೇಶ್ವರಂ ಕಫೆಯಲ್ಲಿ ಇಡ್ಲಿ ತಿಂದು ಬಾಂಬ್ ಇಟ್ಟ ಶಂಕಿತನ ಪೋಟೋ ಲಭ್ಯ –

ಬೆಂಗಳೂರು, ಮಾರ್ಚ್.02: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಸಿಸಿಟಿವಿ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ.
ಕಫೆಯಲ್ಲಿರುವ ಸಿಸಿಟಿವಿ ಆಧಾರದ ಮೇಲೆ ವ್ಯಕ್ತಿಯನ್ನು ಗುರುತಿಸಲಾಗಿದೆ. ಶಂಕಿತ ವ್ಯಕ್ತಿ ಡೆನಿಮ್ ಧರಿಸಿದ್ದು, ತಲೆಗೆ ಟೊಪಿ ಹಾಗೂ ಮಾಸ್ಕ್ ಹಾಕಿದ್ದ, ಕೈಯಲ್ಲಿ ತಟ್ಟೆಯಲ್ಲಿ ಇಡ್ಲಿಯನ್ನು ತಿನ್ನಲಿಕ್ಕೆ ತೆಗೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.
ಟೋಕನ್ ತೆಗೆದುಕೊಂಡ ಶಂಕಿತ ರವೆ ಇಡ್ಲಿ ತಿಂದು ಹ್ಯಾಡ್ ವಾಶಿಂಗ್‌ಗೆ ಹೋಗಿದ್ದಾನೆ. ಹ್ಯಾಂಡ್ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್‌ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಈ ಬ್ಯಾಗ್ ಬ್ಲಾಸ್ಟ್ ಆಗಿದೆ. ಸದ್ಯ ಬೈಕ್ ಮಾಲೀಕ ಯಾರು..? ಬೈಕ್ ಎಲ್ಲಿನದ್ದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ.