Connect with us

    LATEST NEWS

    ಸುರತ್ಕಲ್ – ಮೀನಿನ ಲಾರಿ ಹಾಗೂ ಬೈಕ್​ಗೆ ನಡುವಿನ ಅಫಘಾತದ ಸಿಸಿಟಿವಿ ವಿಡಿಯೋ

    ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ​ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ.


    ಮೃತ ಬೈಕ್ ಸವಾರನನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್( 45) ಎಂದು ಗುರುತಿಸಲಾಗಿದೆ. ಸುರತ್ಕಲ್ ಸುಪ್ರೀಮ್ ಹಾಲ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರತ್ಕಲ್ ಕಡೆಗೆ ಬೈಕ್​ನಲ್ಲಿ ಯೂ ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಉಡುಪಿ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಮೀನಿನ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಲಾರಿಯಡಿಗೆ ಸಿಕ್ಕಿಕೊಂಡ ಸವಾರನನ್ನು ಲಾರಿ ಒಂದು ಮೀಟರ್​ವರೆಗೆ ಎಳೆದೊಯ್ದಿದೆ. ಬೈಕ್ ಲಾರಿಯಡಿಗೆ ಸಿಲುಕಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಅಪಘಾತದ ದೃಶ್ಯ ಹೆದ್ದಾರಿ ಬದಿಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಬೈಕಂಪಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply