ಸಿಮೆಂಟ್ ತುಂಬಿದ ಲಾರಿ ಬೆಂಕಿಗಾಹುತಿ

ಪುತ್ತೂರು ಫೆಬ್ರವರಿ 6: ಸಿಮೆಂಟ್ ತುಂಬಿದ ಲಾರಿಗೆ ಬೆಂಕಿ‌ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ದಕ್ಉಷಿಣ ಕನ್ನಡದ ಪುತ್ತೂರು ಸಮೀಪದ ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯ ಉದನೆ ಎಂಬಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಬರುತ್ತಿದ್ದ ಈ ಲಾರಿಯಲ್ಲಿ ಉದನೆ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು, ಚಾಲಕ ಹಾಗೂ ಕಂಡಕ್ಟರ್ ಲಾರಿಯಿಂದ ಜಿಗಿದು ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಂಡಿದ್ದಾರೆ. ಕ್ಷಣಾರ್ಧದಲ್ಲೇ ಲಾರಿ ತುಂಬಾ ಪಸರಿಸಿದ ಬೆಂಕಿ ಲಾರಿಯನ್ನು ಸಂಪೂರ್ಣ ಸುಟ್ಟು ಭಸ್ಮ ಮಾಡಿದೆ.

ವಿಡಿಯೋಗಾಗಿ…

Facebook Comments

comments