Connect with us

    KARNATAKA

    ಆದಾಯ ತೆರಿಗೆದಾರರಿಗೆ ಶುಭ ಸುದ್ದಿ ನೀಡಿದ ಕೇಂದ್ರ : 7 ಲಕ್ಷ ಆದಾಯಕ್ಕೆ ತೆರಿಗೆ ವಿನಾಯಿತಿ..!

    ನವದೆಹಲಿ: ಬಜೆಟ್‌ನಲ್ಲಿ  7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದ ಸರ್ಕಾರ ಈಗ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿ ಈ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿ ಮಾಡಿದೆ.


    ಈ ಸಂಬಂಧ ಹಣಕಾಸು ಸಚಿವಾಲಯ  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದೆ. ಆದಾಯ ತೆರಿಗೆ ಕಾಯ್ದೆ  ಸೆಕ್ಷನ್‌ 87ಕ್ಕೆ ತಿದ್ದುಪಡಿ ಮಾಡಿ ವಾರ್ಷಿಕ ಬಜೆಟ್​ನಲ್ಲಿ ಪ್ರಕಟಿಸಿದ ಘೋಷಣೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ. ಆದಾಯ 7 ಲಕ್ಷ ರೂಪಾಯಿಯ ತನಕ ಇದ್ದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಸುವಾಗ ಕಟ್ಟಿರುವ ತೆರಿಗೆಯನ್ನು ರಿಬೇಟ್​ ಅಥವಾ ವಾಪಸ್​ ಪಡೆದುಕೊಳ್ಳುವ ಅವಕಾಶ ಲಭ್ಯವಿರುತ್ತದೆ. ಈ ಹಿಂದೆ 5 ಲಕ್ಷ ರೂ. ತನಕ ಆದಾಯ ಇದ್ದವರಿಗೆ ಈ ವಿನಾಯಿತಿ ನೀಡಲಾಗುತ್ತಿತ್ತು. 2023ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಅವಕಾಶವನ್ನು 7 ಲಕ್ಷ ರೂ. ಆದಾಯ ಇರುವವರಿಗೂ ವಿಸ್ತರಿಸಿದ್ದರು.

    https://x.com/FinMinIndia/status/1746736524757176591?s=20

    Share Information
    Advertisement
    Click to comment

    You must be logged in to post a comment Login

    Leave a Reply