LATEST NEWS
ಇಳಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ಇಳಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ನವದೆಹಲಿ ಅಕ್ಟೋಬರ್ 4: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರುಪಾಯಿ ಕಡಿತಗೊಳಿಸಿದೆ, ಈ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚುತ್ತಿದ್ದರೂ ದರ ಸರಿದೂಗಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸುಂಕ ಕಡಿತದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 26 ಸಾವಿರ ಕೋಟಿ ರುಪಾಯಿ ಹೊರೆ ಬೀಳಲಿದೆ. ಉಳಿದಿರುವ ಅವಧಿಗೆ 13 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ 21.48 ರುಪಾಯಿ ಹಾಗೂ ಡೀಸೆಲ್ ಮೇಲೆ ಪ್ರತಿ ಲೀಟರ್ 17.33 ರುಪಾಯಿ ಅಬಕಾರಿ ಸುಂಕ ವಿಧಿಸುತ್ತಿದೆ.
Facebook Comments
You may like
ಬೆಸಿಗೆಯಲ್ಲಿ ಇಳಿಕೆಯಾಗಲಿದೆಯಂತೆ ಪೆಟ್ರೋಲ್ ಬೆಲೆ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಕರುಣೆ ಇಲ್ಲದ ಕೇಂದ್ರ ಸರಕಾರದಿಂದ ಹಗಲು ದರೋಡೆ – ರಮಾನಾಥ ರೈ
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
4ನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ದ ರೋಚಕ ಗೆಲವು – ಸರಣಿ ಗೆದ್ದ ಭಾರತ
ಜನವರಿ 16 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭ
ಪಾಕ್ ಮಹಿಳೆ ಭಾರತದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ!
You must be logged in to post a comment Login