LATEST NEWS
ಡಿ.ಕೆ ಶಿವಕುಮಾರ್ ವಿರುದ್ದ ಕೇಂದ್ರ ಸರಕಾರದಿಂದ ದ್ವೇಷ ಸಾಧನೆ – ಮಾಜಿ ಸಿಎಂ ಸಿದ್ದರಾಮಯ್ಯ
ಡಿ.ಕೆ ಶಿವಕುಮಾರ್ ವಿರುದ್ದ ಕೇಂದ್ರ ಸರಕಾರದಿಂದ ದ್ವೇಷ ಸಾಧನೆ – ಮಾಜಿ ಸಿಎಂ ಸಿದ್ದರಾಮಯ್ಯ
ಮಂಗಳೂರು ಅಗಸ್ಟ್ 31: ರಾಜಕೀಯ ದುರುದ್ದೇಶದಿಂದ ಕೇಂದ್ರ ಸರಕಾರ ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ದ್ವೇಷ ಸಾಧಿಸುತ್ತಿದ್ದು, ಅದಕ್ಕಾಗಿಯೇ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ಅವರಿಗೆ ಕಿರುಕುಳ ನೀಡುತ್ತಿದೆ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇಂದು ದಕ್ಷಿಣಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಗಾಗಿ ಮಂಗಳೂರಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು ಡಿ.ಕೆ ಶಿವಕುಮಾರ್ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದು. ಆದರೆ, ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕಿರುಕುಳ ನೀಡುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.
ಕೇಂದ್ರ ಸರಕಾರ ಬ್ಯಾಂಕ್ ಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಹೆಚ್ಚಾಗಿದ್ದು, ಆರ್ಥಿಕ ಪುನಶ್ಚೇತನ ಎಂದು ಬ್ಯಾಂಕ್ ಗಳ ವಿಲೀನಗೊಳಿಸಲು ಕೇಂದ್ರ ಸರಕಾರ ಹೊರಟಿದ್ದು ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.
ದೇಶದಲ್ಲಿ ಈಗಾಗಲೇ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ದರ ಕುಸಿದಿದೆ. ಆರು ವರ್ಷಗಳಲ್ಲಿ ಮೊದಲ ಬಾರಿಗೆ ಜಿಡಿಪಿ ಬೆಳವಣಿಗೆ ದರ ಶೇ 5ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಆದರೆ, ಅದು ಸರಿಯಾದ ಮಾಹಿತಿ ಅಲ್ಲ. ಜಿಡಿಪಿ ಬೆಳವಣಿಗೆ ದರ ಶೇ 3.7ರಿಂದ ಶೇ 4ರ ನಡುವಿನಲ್ಲೇ ಇದೆ. ಡಾ.ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ದರ ಶೇ 8ರಷ್ಟು ತಲುಪಿತ್ತು ಎಂದರು.