Connect with us

LATEST NEWS

ಓಮಿಕ್ರಾನ್ ಆತಂಕ – ಜಿಲ್ಲಾಮಟ್ಟದಲ್ಲೇ ನಿಯಂತ್ರಣಕ್ಕೆ ನಿರ್ಬಂಧಗಳನ್ನು ವಿಧಿಸಿ

ನವದೆಹಲಿ ಡಿಸೆಂಬರ್ 22: ಓಮಿಕ್ರಾನ್ ರೂಪಾಂತರವು ಡೆಲ್ಟಾಕ್ಕಿಂತ ಕನಿಷ್ಠ ಮೂರು ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.


ಭಾರತದಲ್ಲಿ ಕೋವಿಡ್ 19 ಪ್ರಕರಣಗಳ ಉಲ್ಬಣದ ಆರಂಭಿಕ ಚಿಹ್ನೆಗಳು ಮತ್ತು ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್ ರೂಪಾಂತರದ ಹೆಚ್ಚಿದ ಪತ್ತೆ ಹಚ್ಚುವಿಕೆಯ ದೃಷ್ಟಿಯಿಂದ ಕಠಿಣ ಕ್ರಮಗಳ ಅಗತ್ಯ ಇದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಒಂದು ವಾರದ ಅವಧಿಯಲ್ಲಿ ಕೋವಿಡ್‌ ದೃಢಪಡುವ ಪ್ರಮಾಣವು ಶೇ 10ರಷ್ಟು ಮತ್ತು ಅದಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳು ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ. ಜಿಲ್ಲೆಯಲ್ಲಿ ಲಭ್ಯವಿರುವ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ ಹಾಸಿಗೆಗಳ ಭರ್ತಿ ಪ್ರಮಾಣವು ಶೇ 40ನ್ನು ದಾಟಿದರೆ, ಆ ಜಿಲ್ಲೆಗಳಲ್ಲೂ ನಿಯಂತ್ರಣ ಕ್ರಮ ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.

ಡೆಲ್ಟಾಗಿಂತ ಓಮೈಕ್ರಾನ್‌ ರೂಪಾಂತರ ತಳಿಯು ಮೂರು ಪಟ್ಟು ಹೆಚ್ಚು ತೀವ್ರವಾಗಿ ಹರಡುತ್ತದೆ. ಜತೆಗೆ ದೇಶದ ಹಲವೆಡೆ ಇನ್ನೂ ಡೆಲ್ಟಾ ಪ್ರಕರಣಗಳು ಇವೆ. ಇವುಗಳನ್ನು ಗಮನದಲ್ಲಿ ಇರಿಸಿಕೊಂಡು ಜಿಲ್ಲಾ ಮಟ್ಟದಲ್ಲಿ ಅಗತ್ಯ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *