Connect with us

LATEST NEWS

ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಮುಸ್ತಫಾ ಕುಂಞಿ ನಿಧನ

ಮಂಗಳೂರು ಅಗಸ್ಟ್ 26: ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಮುಸ್ತಫಾ ಕುಂಞಿ (59) ಬುಧವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ‌ನಿಧನರಾದರು.


ಮೂಲತಃ ತೊಕ್ಕೊಟ್ಟು ಸಮೀಪದ ಕುಂಪಲದ ಪ್ರಸ್ತುತ ನಗರದ ಬೋಳಾರದ ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದ ಇವರು ಅನಾರೋಗ್ಯಕ್ಕೀಡಾಗಿ ನಗರದ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಇವರು “ಎಂಎಂಕೆ” ಎಂದೇ ಮಾರುಕಟ್ಟೆಯಲ್ಲಿ ಗುರುತಿಸಲ್ಪಟ್ಟಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Facebook Comments

comments