Connect with us

KARNATAKA

 ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ; ಪತ್ನಿ ಸಾವು

ಕಾರವಾರ: ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ   ಸಚಿವರ ಪತ್ನಿ ವಿಜಯಾ ನಾಯಕ್, ಹಾಗೂ ಪಿಎ​ ಸಾವನ್ನಪ್ಪಿದ್ದಾರೆ. ಇನ್ನು ಸಚಿವರ ಸ್ಥಿತಿ ಗಂಭೀರವಾಗಿದೆ.

ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ಗೋಕರ್ಣಕ್ಕೆ ತೆರಳುವಾಗ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿ ವಿಜಯಾ ನಾಯಕ್ ಗಂಭೀರವಾಗಿ ಗಾಯಗೊಂಡು, ಅವರನ್ನು ಆಸ್ಪತ್ರೆಗೆ ಸಾಗಿಸುವ ಮುನ್ನ ಸಾವನ್ನಪ್ಪಿದ್ದಾರೆ.

ಗಾಯಗೊಂಡವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಸಚಿವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಬಾಂಬೋಲಿ ಆಸ್ಪತ್ರೆಗೆ ಸಾಗಿಸಲಾಗಿದೆ.