Connect with us

    LATEST NEWS

    ಮೀನುಗಾರಿಕೆಯನ್ನು ಆದ್ಯತಾ ವಲಯವಾಗಿ ಅಭಿವೃದ್ದಿ : ಕೇಂದ್ರ ಸಚಿವ ಪರಷೋತ್ತಮ ರೂಪಾಲ

    ಉಡುಪಿ, ಮಾರ್ಚ್ 19 : ದೇಶದಲ್ಲಿ ಮೀನುಗಾರಿಕಾ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ,ಸಮಗ್ರವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕಾಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಹೇಳಿದರು.


    ಅವರು ಇಂದು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಸಾಗರ ಪರಿಕ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೀನುಗಾರರ ಸಮಸ್ಯೆಗಳನ್ನು ಅರಿಯಲು ಪ್ರತ್ಯೇಕ ಮೀನುಗಾರಿಕಾ ಸಚಿವಾಲಯವನ್ನು ಆರಂಭಿಸಲಾಗಿದ್ದು, ಮೀನುಗಾರಿಕೆ ವಲಯದ ಅಭಿವೃಧ್ದಿಗಾಗಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ 20,050 ಕೋಟಿ ಗಳ ವೆಚ್ಚದಲ್ಲಿ ಮೀನಿನ ಉತ್ಪಾದಕತೆ ಹೆಚ್ಚಳ, ಮೀನುಗಾರರು, ಮೀನು ಕೃಷಿಕರ ಅನುಕೂಲಕ್ಕಾಗಿ ಮೀನುಗಾರರ ಅಭಿವೃಧ್ದಿಗೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದ್ದು ಮೀನುಗಾರರರು ವಿವಿಧ ಚಟುವಟಿಕೆಗಳ ಮೂಲಕ ತಮ್ಮ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.


    ಸಾಗರ ಪರಿಕ್ರಮ ಯೋಜನೆಯ ಮೂಲಕ ದೇಶದ 8000 ಕಿ.ಮೀ ಕರಾವಳಿ ವ್ಯಾಪ್ತಿಯಲ್ಲಿನ ಎಲ್ಲಾ ಮೀನುಗಾರಿಕಾ ಬಂದರುಗಳಲ್ಲಿ ಆ ಭಾಗದ ಮೀನುಗಾರರನ್ನು ಬೇಟಿ ಕೇಂದ್ರದ ಮೀನುಗಾರಿಕಾ ಯೋಜನೆಗಳ ಬಗ್ಗೆ ಅವರಿಗೆ ವ್ಯಾಪಕ ಅರಿವು ಮೂಡಿಸುವುದರ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ, ಅವರುಗಳಿಗೆ ಸೂಕ್ತ ಪರಿಹರ ಕಲ್ಪಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಯ ಸಂಪೂರ್ಣ ಪ್ರಯಾಣದ ನಂತರ ಮೀನುಗಾರರ ಸಮಸ್ಯೆಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದ್ದು, ಈ ಸಮಸ್ಯೆಗಳ ನಿವಾರಣೆಗೆ ಕೇಂದ್ರದಿAದ ಅಗತ್ಯವಿರುವ ಯೋಜನೆಗಳನ್ನು ರೂಪಿಸಲು ನೆರವಾಗಲಿದೆ ಎಂದರು. ರಾಜ್ಯದಲ್ಲಿ ಈಗಾಗಲೇ ಕಾರವಾರ ಬಂದರಿಗೆ ಭೇಟಿ ನೀಡಿ,ಸ್ಥಳೀಯ ಮೀನುಗಾರರ ಸಮಸ್ಯೆಗಳನ್ನು ಆಲಿಸಲಾಗಿದ್ದು, ಉಡುಪಿ ಜಿಲ್ಲೆಯ ಮೀನುಗಾರರ ಸಲ್ಲಿಸುವ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು, ಮೀನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ನ ಪ್ರಯೋಜನ ಪಡೆಯುವಂತೆ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply