Connect with us

LATEST NEWS

ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ನಿಧನ

ನವದೆಹಲಿ, ಅಕ್ಟೋಬರ್ 8 : ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆಯ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಿಹಾರದ ಲೋಕ ಜನಶಕ್ತಿ ಪಕ್ಷದ ಪಾಸ್ವಾನ್‌ ಕಳೆದ 5 ದಶಕಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ನೀಡಿದ್ದ ಅವರು ಕೆಲ ದಿನಗಳ ಹಿಂದೆ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಟ್ವೀಟ್‌ ಮಾಡಿ ಮೃತಪಟ್ಟ ವಿಚಾರವನ್ನು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ತಂದೆಯವರು ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯವಿದ್ದಲ್ಲಿ ಮುಂದಿನ ವಾರಗಳಲ್ಲಿ ತನ್ನ ತಂದೆಗೆ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಚಿರಾಗ್ ಹೇಳಿದ್ದರು.

Facebook Comments

comments