ಉಡುಪಿ ಜನವರಿ 16: ಮಲಯಾಳಂ ಚಿತ್ರರಂಗದ ಹೆಸರಾಂತ ನಟ ಕೇಂದ್ರ ಸಚಿವ ಸುರೇಶ್ ಗೋಪಿ ಕುಟುಂಬ ಸದಸ್ಯರೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಶಿರೂರು ಪರ್ಯಾಯದ ಆಮಂತ್ರಣ ಪತ್ರಿಕೆ ನೀಡಿ ಪರ್ಯಾಯ ಕಾರ್ಯಕ್ರಮಗಳಿಗೆ ಆಹ್ವಾನಿಸಿದರು. ಈ ಸಂದರ್ಭ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ,ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಉಪಸ್ಥಿತರಿದ್ದರು