DAKSHINA KANNADA
ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಸೃಷ್ಟಿಸಲು ಸಂಘಪರಿವಾರ ಸಂಚು- ಸಿಎಫ್ಐ ಆರೋಪ
ಪುತ್ತೂರು ನವೆಂಬರ್ 25: ಸಂಘಪರಿವಾರವು ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಠಿಸುವ ಸಂಚು ರೂಪಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಪುತ್ತೂರಿನ ಸರಕಾರಿ ಪಿಯು ಕಾಲೇಜು ಕೊಂಬೆಟ್ಟುವಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಹಲ್ಲೆಯಲ್ಲಿ ಮೂರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ತ್ರಿಶೂಲ ದಾಳಿ, ಬೆದರಿಕೆಗಳು ನಡೆಯಲು ಹಿಂದೂ ಸಂಘಟನೆಗಳ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಲ ನೇರ ಹೊಣೆ ಎಂದು ಆರೋಪಿಸಿದ ಅನೀಸ್ ಕುಂಬ್ರ ಈ ಘಟನೆಗಳು ಪುನರಾವರ್ತಿಸಿದರೆ ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಸೇರಿ ಪುತ್ತೂರು ಚಲೋ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ ಅವರು ಈ ಘಟನೆಯಲ್ಲಿ ಪೋಲೀಸ್ ಇಲಾಖೆಯೂ ವಿಫಲವಾಗಿದೆ ಎಂದು ಅವರು ಆರೋಪಿಸಿದರು.