LATEST NEWS
ಸಿಎಫ್ಐ ಕಾರ್ಯಕರ್ತರಿಂದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ
ಮಂಗಳೂರು ಡಿಸೆಂಬರ್ 26: ಸಿಎಫ್ಐ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಇಂದು ದಕ್ಷಿಣಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಿಎಫ್ಐ ನಾಯಕ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಗೇಟ್ನಲ್ಲಿಯೇ ಮುತ್ತಿಗೆ ಹಾಕಲು ಯತ್ನಿಸಿದ್ದ ಸಿಎಫ್ಐ ಕಾರ್ಯಕರ್ತರನ್ನು ತಡೆದ ಪೊಲೀಸರು, ಸಂಸದರ ಕಚೇರಿಗೆ ಮುತ್ತಿಗೆ ಹಾಕದಂತೆ ತಡೆದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಸಿಎಫ್ಐ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ನೂಕಾಟ ನಡೆಯಿತು.
ಆಕ್ರೋಶಿತರಾದ ಪಿಎಫ್ಐ ಕಾರ್ಯಕರ್ತರು ಕೇಂದ್ರ ಸರ್ಕಾರ, ಜಿಲ್ಲಾ ಸಂಸದ ನಳಿನ್ ಕುಮಾರ್, ಇಡಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೊಲೀಸರು ಸಿಎಫ್ಐ ನಾಯಕರು ಹಾಗೂ ಕೆಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
You must be logged in to post a comment Login