LATEST NEWS
ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಅತಿಥಿ ; ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಪ್ರತಿಭಟನೆ

ಮಂಗಳೂರು ಮಾರ್ಚ್ 30: ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯದ ಮುಖ್ಯ ದ್ವಾರದ ಬಳಿ ಸೇರಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿಧ್ಯಾರ್ಥಿಗಳು ವಿವಿ ವಿರುದ್ದ ಘೋಷಣೆ ಕೂಗಿದರು. ವಿವಿ ಕ್ಯಾಂಪಸ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು,

ಈ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಪೊಲೀಸ್ ಭದ್ರತೆ ಉಲ್ಲಂಘಿಸಿ ಕ್ಯಾಂಪಸ್ ಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.