Connect with us

LATEST NEWS

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕದ್ದ ಕಳ್ಳ ಅರೆಸ್ಟ್

ಮಂಗಳೂರು ಡಿಸೆಂಬರ್ 18: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಲ್ಲಿ ವಿಳಾಸ ಕೇಳುವ ನೆಪದಲ್ಲಿ ಅವರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ಬಂಧಿತನನ್ನು ಹಳೆಯಂಗಡಿಯ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ (30) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು ₹ 70 ಸಾವಿರ ಮೌಲ್ಯದ ಚಿನ್ನದ ಸರ, ₹ 50 ಸಾವಿರ ಮೌಲ್ಯದ ಸ್ಕೂಟರ್, ಸುಮಾರು ₹ 50 ಸಾವಿರ ಮೌಲ್ಯದ ಆಟೊ ರಿಕ್ಷಾ ಹಾಗೂ ಇತರ ಸ್ವತ್ತುಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಆರೋಪಿ 2 ತಿಂಗಳ ಹಿಂದೆ ಜಾಮೀನು ಪಡೆದುಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *