LATEST NEWS
ಜನರ ನಿದ್ದೆಗೆಡಿಸಿದ ಸರಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಪೊಲೀಸರು

ಉಡುಪಿ ಜನವರಿ 6: ಉಡುಪಿ ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಮುಳಿಹಿತ್ಲು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಉಡುಪಿ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ನಡೆದ ಸರಣಿ ಸರಗಳ್ಳತನ ಪ್ರಕರಣಗಳನ್ನು ಪೋಲೀಸರು ಭೇದಿಸಿದ್ದು 172.02 ಗ್ರಾಂ ಚಿನ್ನ, ಹಾಗೂ ಮೂರು ಬೈಕ್ ಸೇರಿ ಒಟ್ಟು ರೂ 9.38 ಲಕ್ಷ ಮೌಲ್ಯದ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಒರ್ವ ಅಂತರ್ ಜಿಲ್ಲಾ ಸರಗಳ್ಳನನ್ನು ಬಂಧಿಸಲಾಗಿದೆ ಎಂದರು.

ಬಂಧಿತ ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆಗೊಳಪಡಿಸಿ ಜುಪಿಟರ್ ಸ್ಕೂಟರ್ ನ ಬಗ್ಗೆ ದಾಖಲಾತಿಯನ್ನು ಕೇಳಿದಾಗ ತಾನು ಸರಗಳ್ಳತನ ಮಾಡುವ ಉದ್ದೇಶದಿಂದ ಮಂಗಳೂರಿನ ಕಂಕನಾಡಿಯ ಗೋರಿಗುಡ್ಡೆ ಎಂಬಲ್ಲಿ ಸೆಕೆಂಡ್ ಹ್ಯಾಂಡ್ ಬಜಾರ್ ನಿಂದ ಖರೀದಿಸಲು ಟೆಸ್ಟ್ ರೈಡ್ ಮಾಡಿ ನೋಡುವುದಾಗಿ ಸುಳ್ಳು ಹೇಳಿ ಮೋಸ ಮಾಡಿ ತೆಗೆದುಕೊಂಡು ಬಂದಿರುವುದಾಗಿ ತಿಳಿಸಿದ್ದಾನೆ. ಈ ಸ್ಕೂಟರ್ ನಲ್ಲಿ ಮಂಗಳೂರು, ಉಡುಪಿಯ ಸೈಂಟ್ಸಿಸಿಲಿ ಶಾಲೆ ಬಳಿ, ಕೆಎಸ್‍ಆರ್ಟಿಸಿ ಬಸ್ ನಿಲ್ದಾಣ, ಇಂದ್ರಾಳಿ, ಇನ್ನು ಉಳಿದ ಕಡೆಗಳಲ್ಲಿ ಒಂಟಿ ಮಹಿಳೆಯರು ನಡೆದುಕೊಂಡು ಹೋಗುತ್ತಿರುವಾಗ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಸುಲಿಗೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ..ಆರೋಪಿಯು ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ ಸೇರಿದಂತೆ ಹಲವಡೆ ನಡೆದ ಕಳ್ಳತನ ಪ್ರಕರಣ ಕುರಿತು ಬಾಯಿ ಬಿಟ್ಟಿದ್ದಾನೆ.