Connect with us

LATEST NEWS

ಸುರತ್ಕಲ್ ಹಾಡುಹಗಲೇ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿ

ಮಂಗಳೂರು ಡಿಸೆಂಬರ್ 18: ಹಾಡುಹಗಲೇ ಮಹಿಳೆಯೊಬ್ಬರ ಚಿನ್ನದ ಸರವನ್ನು ಕದ್ದು ಪರಾರಿಯಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.


ಸುರತ್ಕಲ್ ಕೃಷ್ಣಪುರದ 5 ನೇ ಬ್ಲಾಕ್ ನ ಯುವಕ ಮಂಡಲದ ಹಿಂಬದಿಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಮೂರು ಪವನ್‌ ನ ಸರವನ್ನು ಎಳೆದೊಯ್ದು ಪರಾರಿಯಾಗಿದ್ದಾರೆ. ಚೈನ್ ಎಳೆಯುವ ರಭಸಕ್ಕೆಮಹಿಳೆಯ ಗುತ್ತಿಗೆ ತೀವ್ರ ಗಾಯಗಳಾಗಿವೆ. ಇಬ್ಬರು ಸರಗಳ್ಳರು ಹೆಲ್ಮೆಟ್ ಧಾರಿಯಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Facebook Comments

comments