Connect with us

    KARNATAKA

    ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಒಟ್ಟು 3.67 ಕೋಟಿ ಜಪ್ತಿ

    ಬೆಂಗಳೂರು ಸೆಪ್ಟೆಂಬರ್ 23 : ಬೈಂದೂರಿನ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ಇಲ್ಲಿಯವರೆಗೆ ಸಿಸಿಬಿ ಪೊಲೀಸರು 3.67 ಕೋಟಿ ಜಪ್ತಿ ಮಾಡಿದ್ದಾರೆ.


    ಪ್ರಕರಣದ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ, ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಹಾಗೂ ಇತರರಿಗೆ ಮನೆ ಹಾಗೂ ಜಾಗಗಳಲ್ಲಿ ಶೋಧ ನಡೆಸಲಾಗಿದ್ದು, ನಗದು, ಚಿನ್ನಾಭರಣ, ಠೇವಣಿ, ಆಸ್ತಿ ದಾಖಲೆಗಳು ಹಾಗೂ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹ 3.67 ಕೋಟಿ’ ಎಂದು ಪ್ರಜಾವಾಣಿ ವರದಿ ಮಾಡಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ವಂಚನೆಗೆ ಸಂಬಂಧಪಟ್ಟಂತೆ ಎಲ್ಲ ದಾಖಲೆಗಳನ್ನು ಸಂಗ್ರಹಿಸಲಾಗಿತ್ತು. ದೂರಿನಲ್ಲಿದ್ದ ಸಂಗತಿಗಳಿಗೆ ‍ಪೂರಕವಾದ ಪುರಾವೆಗಳನ್ನು ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ. ಅದಕ್ಕೆ ತಕ್ಕಂತೆ ಮಹಜರು ಹಾಗೂ ಜಪ್ತಿ ಪ್ರಕ್ರಿಯೆ ಸಹ ನಡೆಸಲಾಗಿದೆ.


    ಇನ್ನು ಚೈತ್ರಾ ಕುಂದಾಪುರ, ಗಗನ್ ಹಾಗೂ ಇತರೆ ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಗಿಯಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಮಹಜರು, ಹೇಳಿಕೆ ದಾಖಲು ಹಾಗೂ ಇತರೆ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಶನಿವಾರ ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಅಧಿಕಾರಿ ತಿಳಿಸಿದರು.

    ಚೈತ್ರಾ ಕುಂದಾಪುರ– ₹ 81 ಲಕ್ಷ ನಗದು ₹ 23 ಲಕ್ಷ ಮೌಲ್ಯದ ಚಿನ್ನಾಭರಣ ₹ 1.8 ಕೋಟಿ ಮೊತ್ತದ ನಿಶ್ಚಿತ ಠೇವಣಿ ₹ 12 ಲಕ್ಷ ಮೌಲ್ಯದ ಕಿಯಾ ಕಾರು
    ಹಾಲಶ್ರೀ ಸ್ವಾಮೀಜಿ; ಮಠದಲ್ಲಿ ₹ 56 ಲಕ್ಷ ಪರಿಚಯಸ್ಥನ ಬಳಿ ₹ 25 ಲಕ್ಷ ₹ 25 ಲಕ್ಷ ಮೌಲ್ಯದ ಇನ್ನೋವಾ ಕಾರು
    ಗಗನ್ ಕಡೂರು– ₹ 20 ಲಕ್ಷ ನಗದು ಧನರಾಜ್ ಹಾಗೂ ರಮೇಶ್: ₹ 6 ಲಕ್ಷ

    ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಡಿಸಿಪಿ ಅಬ್ದುಲ್ ಅಹದ್ ಹಾಗೂ ಎಸಿಪಿ ರೀನಾ ಸುವರ್ಣಾ ನೇತೃತ್ವದ ತಂಡ ಶೇ 88.50ರಷ್ಟು ಜಪ್ತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply