LATEST NEWS
ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ – ಸುರತ್ಕಲ್ ಬಳಿ ಚೈತ್ರಾಳ ದ್ವಿಚಕ್ರ ವಾಹನ ಪತ್ತೆ
ಮಂಗಳೂರು ಫೆಬ್ರವರಿ 25: ಪಿಎಚ್ ಡಿ ವಿಧ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚೈತ್ರಾ ಹೆಬ್ಬಾರ್ ಬಳಸುತ್ತಿದ್ದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.ದ್ವಿಚಕ್ರ ವಾಹನ ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಚೈತ್ರಾಳ ಪತ್ತೆ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಪಿಎಚ್ ಡಿ ವಿಧ್ಯಾರ್ಥಿನಿಯಾಗಿರುವ ಚೈತ್ರಾ ಹೆಬ್ಬಾರ್ ಮಂಗಳೂರಿನ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ನಡುವೆ ಫೆಬ್ರವರಿ 17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾಳ ಮೊಬೈಲ್ ಪಂಪ್ ವೆಲ್ ಬಳಿ ಸ್ವಿಚ್ಡ್ ಆಫ್ ಆಗಿತ್ತು. ಸುರತ್ಕಲ್ ಬಳಿಯ ಎಟಿಎಂನಲ್ಲೂ ಹಣ ಡ್ರಾ ಮಾಡಿದ್ದಳು ಎನ್ನುವ ಮಾಹಿತಿ ತಿಳಿದು ಬಂದಿದೆ.
ಸದ್ಯ, ಚೈತ್ರಾ ಕೇರಳ ಅಥವಾ ಬೆಂಗಳೂರು ಕಡೆ ಇರುವ ಅನುಮಾನ ವ್ಯಕ್ತವಾಗಿದೆ. ಅನ್ಯಕೋಮಿನ ಯುವಕನ ಜೊತೆ ಚೈತ್ರಾ ತೆರಳಿರುವ ಸಾದ್ಯತೆ ಇದೆ ಎಂದು ಹೇಳಲಾಗಿದ್ದು, ಹಿಂದೂ ಪರ ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿವೆ. ಈ ಬಗ್ಗೆ ಮಾತನಾಡಿದ ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ, ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸನ್ನು ಸರ್ಕಾರ ಮತ್ತು ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಸುಸಂಸ್ಕೃತ ಮನೆಯ ಹುಡುಗಿಯನ್ನ ಬ್ಲ್ಯಾಕ್ ಮೇಲ್ ಹಾಗೂ ವಂಚಿಸಿ ಅಪಹರಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
You must be logged in to post a comment Login