Connect with us

    KARNATAKA

    ಚೈತ್ರಾ ಕುಂದಾಪುರ ವಂಚನೆ ಪ್ರಕರಣ – 800 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರು ನವೆಂಬರ್ 08: ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ಗ್ಯಾಂಗ್ ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ದ ಇದೀಗ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.


    ಬಿಜೆಪಿ ಟಿಕೆಟ್ ನೀಡುತ್ತೇನೆ ಎಂದು ಬೈಂದೂರು ಉದ್ಯಮಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಚೈತ್ರಾ ಮತ್ತು ಗ್ಯಾಂಗ್ ನ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 75 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    4.11 ಕೋಟಿ ನಗದು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಾಥಮಿಕ, ಸಾಂದರ್ಭಿಕ ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಉದ್ಯಮಿ ಗೋವಿಂದ ಬಾಬು ಪೂಜಾರಿ 10 ವಿಡಿಯೋ ಹಾಗೂ ಆಡಿಯೋ ದಾಖಲೆಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು. ಪ್ರಕರಣ ಎಲ್ಲಾ ಆರೋಪಿಗಳು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಹಗರಣದ ಸೂಕ್ಷ್ಮತೆಯನ್ನು ಪರಿಗಣಿಸಿ ನ್ಯಾಯಾಲಯಗಳು ಆರೋಪಿಗಳಿಗೆ ಇದುವರೆಗೆ ಜಾಮೀನು ನಿರಾಕರಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *