KARNATAKA
ಹಿಂದೂ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಆರೆಸ್ಟ್..!
ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಸಪ್ಟೆಂಬರ್ 13. ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಆರೋಪದ ಮೇಲೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಆರೋಪಿಗಳು.
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಂದ 7 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪ ಈ ನಾಲ್ವರ ವಿರುದ್ಧವಿದೆ.
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂ. ಉಂಡೇನಾಮ ತಿಕ್ಕಲಾಗಿದೆ.
ಈ ಬಗ್ಗೆ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಬಗ್ಗೆ ಬಹಳ ಪ್ರಯತ್ನ ಮಾಡಿದ್ದರು. ಗೋವಿಂದ ಬಾಬು ಜೊತೆಗಿದ್ದವರೇ ಹಣ ವಸೂಲಿಗೆ ಇಳಿದಿದ್ದರು.
ಅತ್ತ ಟಿಕೆಟ್ ಸಿಗದೆ ಕಾಸು ಕಳೆದುಕೊಂಡ ಗೋವಿಂದ ಬಾಬು ಪೂಜಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಮಿಂಚಿನ ಕಾರ್ಯಾಚರಣೆ ಮಾಡಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ರಾತ್ರೋರಾತ್ರಿ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಕಳೆದ ಹಲವಾರು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್‌ನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬಂಧನ ಪ್ರಕ್ರಿಯೆ ನಡೆಸಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.