Connect with us

KARNATAKA

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಸ್ವಾಮಿ ಒಡಿಶಾದಲ್ಲಿ ಅರೆಸ್ಟ್..!

Share Information

ಉಡುಪಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‍ನ ಮೂರನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಯನ್ನು ಸಿಸಿಬಿ ತಂಡ ಒಡಿಶಾದಲ್ಲಿ ಬಂಧಿಸಿದೆ.

ಬೆಂಗಳೂರು: ಉಡುಪಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‍ನ ಮೂರನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಯನ್ನು ಸಿಸಿಬಿ ತಂಡ ಒಡಿಶಾದಲ್ಲಿ ಬಂಧಿಸಿದೆ.


ಪ್ರಕರಣ ದಾಖಲಾದ ದಿನದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಹಾಲಶ್ರೀ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ.

ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು.

ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು.

ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು.

ಇದೀಗ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ.

ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು. ಇದೀಗ ಹಾಲಶ್ರೀ ಸ್ಮಾನೀಯ ಬಂಧನದಿಂದ ಅನೇಕ ನಿಗೂಢ ವಿಚಾರಗಳು ಬಯಲಿಗೆ ಬರುವ ಸಾಧ್ಯತೆಗಳಿವೆ,


Share Information
Advertisement
Click to comment

You must be logged in to post a comment Login

Leave a Reply