KARNATAKA
ಪರಪ್ಪನ ಅಗ್ರಹಾರ ಜೈಲಿಗೆ ಚೈತ್ರಾ ಕುಂದಾಪುರ ….!!
ಬೆಂಗಳೂರು ಸೆಪ್ಟೆಂಬರ್ 23: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇತರೆ 6 ಮಂದಿ ಆರೋಪಿಗಳಿಗೆ ಅಕ್ಟೋಬರ್ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿದ್ದ ಚೈತ್ರಾ ಕುಂದಾಪುರ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ವೇಳೆ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು. ಅಕ್ಟೋಬರ್ 6ರವರೆಗೆ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿದಂತೆ 7 ಜನರು ಪರಪ್ಪನ ಅಗ್ರಹಾರದಲ್ಲಿ ಇರಲಿದ್ದಾರೆ.
ಇನ್ನು ಆರೋಪಿಗಳಾದ ರಮೇಶ್, ಚನ್ನನಾಯಕ್ ಮತ್ತು ಧನರಾಜ್ ಅವರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲಿ ಎಂದು 3ನೇ ಎಸಿಎಂಎಂ ಕೋರ್ಟ್ ಪ್ರಾಸಿಕ್ಯೂಟರ್ ಗೆ ಸೂಚನೆ ನೀಡಿದೆ. ಜೊತೆಗೆ ಸೆ.26ಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
You must be logged in to post a comment Login