LATEST NEWS
ಪುತ್ತೂರು ಮಹಾಲಿಂಗೇಶ್ವರ ದೇವರ ದರ್ಶನ ಪಡೆದ ಚಾಲೆಂಜಿಗ್ ಸ್ಟಾರ್ ದರ್ಶನ

ಪುತ್ತೂರು ಮಹಾಲಿಂಗೇಶ್ವರ ದೇವರ ದರ್ಶನ ಪಡೆದ ಚಾಲೆಂಜಿಗ್ ಸ್ಟಾರ್ ದರ್ಶನ
ಪುತ್ತೂರು ಜೂನ್ 28: ಕನ್ನಡದ ಖ್ಯಾತ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪುತ್ತೂರಿನ ಸ್ನೇಹಿತನೋರ್ವನ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ ದರ್ಶನ್ ಬಳಿಕ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ ಅವರು ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ದರ್ಶನ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಸುಬ್ರಹ್ಮಣ್ಯ ನ ಅನುಗ್ರಹ ಪಡೆದರು.ದರ್ಶನ್ ಜೊತೆಗೆ ಅವರ ಆಪ್ತ ವರ್ಗವೂ ಭಾಗಿಯಾಗಿತ್ತು.
