KARNATAKA
ಖ್ಯಾತ ಸಾಹಿತಿ ಚಂದ್ರಶೇಖರ್ ಪಾಟೀಲ್ ಇನ್ನಿಲ್ಲ…!!

ಬೆಂಗಳೂರು ಜನವರಿ 10: ಕನ್ನಡ ಖ್ಯಾತ ಸಾಹಿತಿ ಚಂಪಾ ಎಂದೇ ಪ್ರಸಿದ್ದಿ ಹೊಂದಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಧಾರವಾಡದವರಾದ ಚಂಪಾ ಅವರು ಕೆಲವಾರು ವರ್ಷಗಳಿಂದ ಬೆಂಗಳೂರು ನಿವಾಸಿಯಾಗಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.

ಸುದೀರ್ಘ ಅವಧಿ ಅವರು “ಸಂಕ್ರಮಣ” ಹೆಸರಿನ ಸಾಹಿತ್ಯ ಪತ್ರಿಕೆಯ ಸಂಪಾದಕರು- ಪ್ರಕಾಶಕರೂ ಆಗಿದ್ದರು. ಕನ್ನಡದ ಹಲವು ಸಾಹಿತಿಗಳನ್ನು ಗುರುತಿಸಿದ ಹೆಗ್ಗಳಿಕೆಯನ್ನು ಈ ಪತ್ರಿಕೆ ಹೊಂದಿದೆ. ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮೌಲಿಕ ಕೆಲಸಗಳನ್ನು ಮಾಡಿರುವ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ.
ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು. ನಾಡು – ನುಡಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಇವರ ಭೌತಿಕ ಅಗಲಿಕೆಗೆ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ.