FILM
ಮದುವೆ ವಿಚ್ಚೇದನ ಕುರಿತಂತೆ ಪ್ರತಿಕ್ರಿಯೆ ನೀಡಿದ ಚಂದನ್ ಶೆಟ್ಟಿ
ಬೆಂಗಳೂರು ಜೂನ್ 07: ಸಿನೆಮಾ ಹಾಗೂ ಕಿರುತೆರೆಯಲ್ಲಿ ಶಾಕಿಂಗ್ ಸುದ್ದಿಯಾಗಿದ್ದ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಡೈವೋರ್ಸ್ ಕುರಿತಂತೆ ಇದೀಗ ಮೊದಲ ಬಾರಿಗೆ ಚಂದನ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಚಂದನ್ ಶೆಟ್ಟಿ ಅದರಲ್ಲಿ ಇಂದು, ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ ಎಂದಿದ್ದಾರೆ. ಇನ್ನು, ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರಮೇಲಿರಲಿ ಎಂದು ಚಂದನ್ ಶೆಟ್ಟಿ ಕೇಳಿಕೊಂಡಿದ್ದಾರೆ.
4 ವರ್ಷಗಳ ಹಿಂದೆ 2020ರಲ್ಲಿ ಫೆಬ್ರವರಿ 26ನೇ ತಾರೀಕಿನಂದು ಬಿಗ್ಬಾಸ್ ಖ್ಯಾತಿಯ ಚಂದನ್ ಶೆಟ್ಟಿ- ನಿವೇದಿತಾ ಗೌಡ ಮದುವೆ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು, ಇನ್ನು, ಇಷ್ಟು ದಿನ ಚೆನ್ನಾಗಿ ಇದ್ದ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ ದಿಢೀರ್ ಅಂತಾ ಡಿವೋರ್ಸ್ ಮಾಡಿಕೊಂಡಿದ್ದಾರೆ. ಈ ಜೋಡಿ ಡಿವೋರ್ಸ್ ಸುದ್ದಿ ಕೇಳಿ ಎಲ್ಲರಿಗೂ ಶಾಕ್ ಆಗಿದೆ. ಇಬ್ಬರು ಪರಸ್ಪರ ಒಪ್ಪಂದದ ಮೇರೆಗೆ ಡಿವೋರ್ಸ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.