FILM
ಚಂದನ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 5 ವಿಜೇತರಾಗಿ ಆಯ್ಕೆಯಾಗಿದ್ದಾರೆ
ಚಂದನ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 5 ವಿಜೇತರಾಗಿ ಆಯ್ಕೆಯಾಗಿದ್ದಾರೆ
ಬೆಂಗಳೂರು ಜನವರಿ 5: ಕನ್ನಡದ ಬಿಗ್ ಬಾಸ್ ಸಿಸನ್ 5 ರ ವಿಜೇತರಾಗಿ ಚಂದನ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಕನ್ನಡದ ರಾಪರ್ ಚಂದನ್ ಶೆಟ್ಟಿ ಅಧಿಕ ವೋಟ್ ಗಳನ್ನು ಪಡೆದು ವಿಜೇತರಾಗಿದ್ದಾರೆ.
ಈ ಬಾರಿಯ ಬಿಗ್ ಬಾಸ್ ನಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಚಂದನ್ ಶೆಟ್ಟಿ ಅವರೇ ಗೆಲುವಿನ ಹಾದಿಯಲ್ಲಿ ಮುಂಚೂಣಿಯಲ್ಲಿದ್ದರು. ಫಿನಾಲೆಗೆ ಏರಿದ ಚಂದನ್ ಶೆಟ್ಟಿ ಹಾಗೂ ದಿವಾಕರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಚಂದನ್ ಶೆಟ್ಟಿ ಬಿಗ್ ಬಾಸ್ ನ ವಿಜೇತರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿಗಳಾದ ದಿವಾಕರ್, ಶ್ರುತಿ ಪ್ರಕಾಶ್, ಜೆಕೆ, ನಿವೇದಿತಾ ಗೌಡ ಪೈಕಿ ಚಂದನ್ ಶೆಟ್ಟಿ ಅತಿ ಹೆಚ್ಚು ಮತಗಳನ್ನು ಗಳಿಸಿದ್ದಾರೆ.
You must be logged in to post a comment Login