Connect with us

    DAKSHINA KANNADA

    ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ!

    ಮಂಗಳೂರು, ಮೇ 27: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

    ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.

    ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

    ‘ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರಿಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *