Connect with us

KARNATAKA

ಚಾರ್ಮಾಡಿ ನಿಯಂತ್ರಣ ತಪ್ಪಿ ತಡೆಗೊಡೆಗೆ ಡಿಕ್ಕಿ ಹೊಡೆದ ಕಾರು..ನಾಲ್ವರು ಪ್ರಾಣಾಪಯದಿಂದ ಪಾರು

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಐ-20 ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.


ಚಿಕ್ಕಮಗಳೂರು ಮೂಡಿಗೆರೆ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಕೂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ತಡೆಗೋಡೆ ಇಲ್ಲದಿದ್ದರೆ 300 ಅಡಿ ಪ್ರಪಾತಕ್ಕೆ ಬಿದ್ದು, ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಒಂದೇ ಕುಟುಂಬದ ನಾಲ್ವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.