LATEST NEWS
ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಚಾರ್ಮಾಡಿ ಘಾಟ್ ಮುಕ್ತ

ಉಡುಪಿ ಅಗಸ್ಟ್ 13: ಸತತ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆ ರಾತ್ರಿ ಸಂದರ್ಭ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದುವರೆಗೆ ಲಘು ವಾಹನಗಳಾ ದ ಟೆಂಪೊ ಟ್ರಾವೆಲ್ಲರ್, ವ್ಯಾನ್, ಕಾರು, ಜೀಪ್, ಆಂಬುಲೆನ್ಸ್, ಎಲ್ಸಿವಿ, ದ್ವಿಚಕ್ರ ವಾಹನಗಳು ಬೆಳಗ್ಗೆ 6ರಿಂದ ಸಂಜೆ 7ರ ವರೆಗೆ ಮಾತ್ರ ಸಂಚರಿಸಬಹುದಿತ್ತು. ಸದ್ಯ ನಿರ್ಬಂಧ ತೆರವುಗೊಳಿಸಿದೆ. ಕೆಎಸ್ಸಾರ್ಟಿಸಿ ಕೆಂಪು ಬಸ್, ಆರು ಚಕ್ರದ ಲಾರಿಗಳಿಗೆ ರಾತ್ರಿ ಸಂಚಾರಕ್ಕೆ ಅವಕಾಶವಿಲ್ಲ, ಬೆಳಗ್ಗೆ 6ರಿಂದ ಸಂಜೆ 7ರ ವರೆಗೆ ಮಾತ್ರ ಸಂಚರಿಸಬಹುದು. ಆದರೆ ಬುಲೆಟ್ ಟ್ಯಾಂ ಕರ್, ಶಿಪ್ ಕಾರ್ಗೊ ಕಂಟೈನರ್, ಲಾಂಗ್ ಚಾಸೀಸ್ ವಾಹನ, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಕ್ಸೆಲ್ ಟ್ರಕ್, ಟ್ರಕ್ ಟ್ರೇ ಲರ್, ಕೆಎಸ್ಸಾರ್ಟಿಸಿ ರಾಜಹಂಸ ಮತ್ತಿತರ ಅಧಿಕ ಭಾರದ ಸರಕು ಸಾಗಾಟ ವಾಹನ ಸಂಚಾರ ಸಂಚಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ದಿನದ 24 ಗಂಟೆ ಚಾರ್ಮಾಡಿ ಮೂಲಕ ಟೆಂಪೋ ಟ್ರಾವೆಲ್ಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್ ಹಾಗೂ ದ್ವಿಚಕ್ರ ವಾಹನಗಳು ಸಂಚಾರ ನಡೆಸಬಹುದಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.