LATEST NEWS
ಚಾರ್ಮಾಡಿ ಘಾಟ್ನಲ್ಲಿ ರಸ್ತೆಗೆ ಬಿದ್ದ ಮರ – ಚಿಕ್ಕಮಗಳೂರು-ಮಂಗಳೂರು ಮಾರ್ಗ ಬಂದ್
ಮಂಗಳೂರು ಜುಲೈ 30: ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮತ್ತೆ ಚಾರ್ಮಾಡಿ ಘಾಟ್ ನಲ್ಲಿ ಮರವೊಂದು ರಸ್ತೆ ಮೇಲೆ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.
ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.
You must be logged in to post a comment Login