KARNATAKA
ಚಾರ್ಮಾಡಿ 10 ನೇ ತಿರುವಿನಲ್ಲಿ ಗುಡ್ಡ ಕುಸಿತ – ಸಂಚಾರ ತಾತ್ಕಾಲಿಕ ಸ್ಥಗಿತ
ಚಿಕ್ಕಮಗಳೂರು ಜುಲೈ 27: ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ಗುಡ್ಡ ಕುಸಿದ ಪರಿಣಾಮ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವುದಾಗಿ ವರದಿಯಾಗಿದೆ. ಮುಂಜಾಗೃತ ಕ್ರಮವಾಗಿ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇದರಿಂದ ಕೊಟ್ಟಿಗೆಹಾರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿಯುವ ಆಂತಕ ಎದುರಾಗಿದೆ.