LATEST NEWS
ತಕ್ಷಣಕ್ಕೆ ಜಾರಿಗೆ ಬರುವಂತೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಚಾರ್ಮಾಡಿ ಘಾಟ್ ನಲ್ಲಿ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ
ಚಿಕ್ಕಮಗಳೂರು ಜುಲೈ 23: ಮುಂಗಾರು ಮಳೆ ಅಬ್ಬರ ಭಾರಿ ಹಾನಿಯನ್ನುಂಟು ಮಾಡಿದ್ದು, ಶಿರಾಢಿ ಘಾಟ್ ರಸ್ತೆ ಬಂದ್ ನಡುವೆಯೇ ಇದೀಗ ಚಾರ್ಮಾಡಿ ಘಾಟ್ ನಲ್ಲೂ ಇಂದಿನಿಂದ ಮುಂದಿನ ಆದೇಶದವರೆಗೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಶಿರಾಢಿ ಘಾಟ್ ಪ್ರದೇಶದಲ್ಲಿ ಭೂ ಕುಸಿತದಿಂದ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಎಲ್ಲಾ ವಾಹನಗಳು ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುತ್ತಿದ್ದು, ಮಲೆನಾಡಿನಲ್ಲೂ ಭಾರಿ ಮಳೆ ಸುರಿಯುತ್ತಿದ್ದು,. ಚಾರ್ಮಾಡಿ ಘಾಟ್ ನಲ್ಲಿ ಕಡಿದಾದ ತಿರುವುಗಳಿವೆ, ಅಲ್ಲದೆ ರಾತ್ರಿ ಸಂದರ್ಭ ಮಳೆಯಿಂದಾಗಿ ಇಬ್ಬನಿ ಬಿಳುತ್ತಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗಲಿದೆ., ಅಲ್ಲದೆ ಮಳೆ ಅಬ್ಬರ ಹೆಚ್ಚಾಗಿರುವ ಸಾದ್ಯತೆ ಇಂದ ದೊಡ್ಡ ಮರಗಳು ರಸ್ತೆಗೆ ಬೀಳುವ ಸಾಧ್ಯತೆ ಇದ್ದು, ಈ ಹಿನ್ನಲೆ ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಜೆ 7 ರಿಂದ ಬೆಳಿಗ್ಗೆ 6 ವರೆಗೆ ಚಾರ್ಮಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಇನ್ನು ಬೆಳಿಗ್ಗೆ 6 ರಿಂದ ಸಂಜೆ 7 ರವೆರೆಗೆ ಕೇವಲ ಲಘು ವಾಹನಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.