Connect with us

    DAKSHINA KANNADA

    ಹದಗೆಟ್ಟ ಆರೋಗ್ಯ , ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು

    ಹದಗೆಟ್ಟ ಆರೋಗ್ಯ , ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು

    ಮಂಗಳೂರು, ಅಕ್ಟೋಬರ್ 26: ಸುಬ್ರಹ್ಮಣ್ಯದಲ್ಲಿ ಹಿಂದೂ ಮುಖಂಡನೋರ್ವನಿಗೆ ಹಲ್ಲೆ ನಡೆಸಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಹಾಗೂ ಆಕೆಯ ಆರು ಮಂದಿ ಸಹಚರರಿಗೆ ಸುಳ್ಯ ಜೆಎಂಎಫ್ಸಿ ನ್ಯಾಯಾಲಯ ನವಂಬರ್ 3 ರ ತನಕ ನ್ಯಾಯಾಂಗ ಬಂಧನ ವಿಧಿಸಿತ್ತು.

    ಮಂಗಳೂರಿನ ಸಬ್ ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಪೋಲೀಸರು ದಾಖಲಿಸಿದ್ದಾರೆ.

    ತೀವೃ ಜ್ವರದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply