LATEST NEWS
ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ : ಪ್ರಧಾನಿ ಭೇಟಿಯ ಕೆಲವೇ ಗಂಟೆ ಮೊದಲು ಮೂವರು ಗ್ರಾಮಸ್ಥರ ಹತ್ಯೆ
ರಾಯ್ಪುರ: ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಮಾವೋವಾದಿಗಳು ಮೂವರು ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾರೆ.
ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಈ ಹತ್ಯಾಕಾಂಡ ನಡೆದಿದೆ.
ಮೂವರು ಗ್ರಾಮಸ್ಥರು ಪೊಲೀಸ್ ಮಾಹಿತಿದಾರರೆಂದು ಭಾವಿಸಿ ನಕ್ಸಲರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನಕ್ಸಲ್ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದ್ದು ಆತಂಕಕ್ಕೆ ಸಹ ಕಾರಣವಾಗಿದೆ. ಮೃತರನ್ನು ಕುಳ್ಳೆ ಕಟ್ಲಾಮಿ (35) ಮನೋಜ್ ಕೊವಾಚಿ (22) ಮತ್ತು ದುಗ್ಗೆ ಕೊವಾಚಿ (27) ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ಕರಪತ್ರಗಳನ್ನು ಇಡಲಾಗಿದ್ದು, ಈ ಮೃತಪಟ್ಟ ಮೂವರು ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು.
ಇದಕ್ಕಾಗಿ ಕೊಲ್ಲಲಾಗಿದೆ ಎಂದು ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಛತ್ತೀಸ್’ಗಢದ ಕಂಕೇರ್ ನಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.