DAKSHINA KANNADA
ಕಡಬ – ಶಾಲಾ ಮಕ್ಕಳಿಗೆ ಚಿಕನ್ ಪಾಕ್ಸ್
ಪುತ್ತೂರು ಫೆಬ್ರವರಿ 04: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭದ ಹಂತದಲ್ಲಿದೆ. ಈ ನಡುವೆ ಇದೀಗ ಶಾಲಾ ಮಕ್ಕಳಲ್ಲಿ ಚಿಕಿನ್ ಪಾಕ್ಸ್ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನಲ್ಲಿ 21 ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ.
ಕಡಬ ಒಂದೇ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ಪಾಕ್ಸ್ ಬಂದಿದೆ. ಆರೋಗ್ಯ ಇಲಾಖೆಯಿಂದ ದೊರೆತ ಮಾಹಿತಿ ಅನ್ವಯ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು, ಲಾವತ್ತಡ್ಕದಲ್ಲಿ ಒಂದು, ಗೋಳಿತ್ತೊಟ್ಟುವಿನಲ್ಲಿ ಒಂದು, ಕುಕ್ಕೆ ಸುಬ್ರಹ್ಮಣ್ಯದ ಶಾಲೆಯ 6 ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ಪಾಕ್ಸ್ ಹರಡಿರುವ ಬಗ್ಗೆ ಪ್ರಸ್ತುತ ಮಾಹಿತಿ ಲಭ್ಯವಾಗಿದೆ.
ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೇ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ.