LATEST NEWS
ಚಿಕ್ಕಮಗಳೂರು – ಅಪ್ರಾಪ್ತ ತಂಗಿಯ ಮೇಲೆ ನಿರಂತರ ಅತ್ಯಾಚಾರಗೈದ ಅಣ್ಣ
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತೆ ಮೆಲೆ 30 ಮಂದಿಯ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲಿ ಅಣ್ಣನೊಬ್ಬ ತನ್ನ ಸ್ವಂತ ತಂಗಿಯ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಅರೆಕುಡಿಗೆ ಮಕ್ಕಿಮನೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥೆಯ ಅಣ್ಣ 13 ವರ್ಷ ವಯಸ್ಸಿನ ತನ್ನ ತಂಗಿಯ ಮೇಲೆ ನಿರಂತರ ಅತ್ಯಾಚಾರ ವೆಸಗಿದ್ದಾನೆ. ಇತ್ತೀಚೆಗೆ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಪಾಲಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದೆ.
ಸಂತ್ರಸ್ಥೆಯ ವಿಚಾರಣೆ ನಡೆಸಿದಾಗ ತನ್ನ ಅಣ್ಣನ ವಿಚಾರವನ್ನು ತಿಳಿಸಿದ್ದಾಳೆ. ಇನ್ನು ಆರೋಪಿ ಕೂಡ ಅಪ್ರಾಪ್ತ ಎಂದು ತಿಳಿದುಬಂದಿದೆ. ಆತನಿಗಿನ್ನೂ 18 ವರ್ಷ ತುಂಬಿಲ್ಲ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.