KARNATAKA
ಚಿಕ್ಕಮಗಳೂರು – ವೈದ್ಯರ ಮೇಲೆ ಚಪ್ಪಲಿ ಎಸೆದು ಹಲ್ಲೆ ನಡೆಸಿದ ಮಹಿಳೆ
ಚಿಕ್ಕಮಗಳೂರು ಸೆಪ್ಟೆಂಬರ್ 10: ಚಿಕಿತ್ಸೆ ನೀಡುವಾಗ ಹೊರಗೆ ಹೋಗಿ ಎಂದು ಹೇಳಿದ್ದಕ್ಕೆ ಕರ್ತವ್ಯ ನಿರತ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗಲಾಟೆಯೊಂದರಲ್ಲಿ ಗಾಯವಾಗಿ ಇರ್ಷಾದ್ ಎಂಬುವರು ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿದ್ದ ಮೂಳೆ ತಜ್ಞ ವೆಂಕಟೇಶ್ ಅವರು ತಪಾಸಣೆ ನಡೆಸುವಾಗ ಎಲ್ಲರೂ ಒಟ್ಟಿಗೇ ಒಳಗೆ ಬಂದಿದ್ದು, ಹೊರ ಹೋಗುವಂತೆ ವೈದ್ಯರು ತಿಳಿಸಿದಾಗ ಮಾತಿಗೆ ಮಾತು ಬೆಳೆದಿದೆ. ಕುಪಿತಗೊಂಡ ಗಾಯಾಳು ಸಂಬಂಧಿ ತಸ್ಲಿಮಾ ವೈದ್ಯರ ಕೊರಳ ಪಟ್ಟಿ ಹಿಡಿದು ಎಳೆದಿದ್ದಾರೆ. ಅಲ್ಲದೆ ಚಪ್ಪಲಿ ಬಿಚ್ಚಿ ಎಸೆದಿದ್ದಾರೆ.
ಘಟನೆಯ ಬಳಿಕ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿ ಒಪಿಡಿ ಸೇವೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ನ್ಯಾಯ ಕೊಡಿಸುವಂತೆ ಆಸ್ಪತ್ರೆ ಸಿಬ್ಬಂದಿ ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಘಟನೆ ನಡೆದಿದೆ.
#chikkamagaluru #doctor
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲೆ ಹಲ್ಲೆ pic.twitter.com/50v2j4LhMP— themangaloremirror (@themangaloremir) September 10, 2024
You must be logged in to post a comment Login