Connect with us

    KARNATAKA

    ಚಿಕ್ಕಮಗಳೂರು – ಶಿಕಾರಿ ವೇಳೆ ಆಕಸ್ಮಿಕ ಗುಂಡೇಟು ತಗುಲಿ ಯುವಕ ಸಾವು…?

    ಚಿಕ್ಕಮಗಳೂರು ಮೇ 17: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಯುವಕನೊಬ್ಬ ಆಕಸ್ಮಿಕವಾಗಿ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ಉಳುವಾಗಿಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

    ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಗುರುತಿಸಲಾಗಿದೆ. ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿತ್ತು ಎನ್ನಲಾಗಿದೆ.
    ಮೃತದೇಹದ ಸಮೀಪವೇ ತೋಟದ ಬೇಲಿಯಲ್ಲಿ ತೋಟಕೋವಿಯೊಂದು ಪತ್ತೆಯಾಗಿದೆ. ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ . ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply