Connect with us

KARNATAKA

ಚಿಕ್ಕಮಗಳೂರು – ಅಜ್ಜಿಯ ಮೇಲೆ ಮೊಮ್ಮಗನೇ ಅ*ತ್ಯಾ*ಚಾ*ರಕ್ಕೆ ಯತ್ನಿಸಿ ಕೊ*ಲೆ – ಕಾರಣ ಕೇಳಿ ಶಾಕ್ ಆದ ಪೊಲೀಸರು

ಚಿಕ್ಕಮಗಳೂರು ನವೆಂಬರ್ 26: ತನಗಿರುವ ಕಾಯಿಲೆ ಗುಣವಾಗಲು ಅಜ್ಜಿಯ ಮೇಲೆ ಅತ್ಯಾಚಾರ ಎಸಗಿ ಮೊಮ್ಮಗನೇ ಕೊಲೆಗೈದ ಘಟನೆ ಕೊಳಗಾಮೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಇನ್ನೂ ಅತ್ಯಾಚಾರಕ್ಕೆ ಯತ್ನಿಸುವ ಮುನ್ನವೇ ಆರೋಪಿ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.


ನವೆಂಬರ್ .21 ರಂದು ಕೊಳಗಾಮೆ ಗ್ರಾಮದಲ್ಲಿ ಡಬಲ್ ಮರ್ಡರ್ ನಡೆದಿತ್ತು. ಕರಿಬಸವಯ್ಯ (65) ಅವರ ಪತ್ನಿ ಲಲೀತಮ್ಮ (60) ಎಂಬವರ ಕೊಲೆಯಾಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ.

ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅವನಿಗೆ ಮಹಿಳೆಯರ ಬಳಿ ಹೋಗುವ ಅಭ್ಯಾಸ ಇತ್ತಂತೆ. ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಆತನ ಸ್ನೇಹಿತರು, ನೀನು ಮಹಿಳೆಯರ ಬಳಿ ಹೋದಾಗ ಕಾಂಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ ಎಂದು ಹೇಳಿದ್ದರಂತೆ. ಅದಕ್ಕೆ ಬೆಂಗಳೂರಿನಲ್ಲಿ ಯಾರು ಒಪ್ಪದ ಕಾರಣ ಅಜ್ಜ-ಅಜ್ಜಿಯ ಮನೆಗೆ ಬಂದಿದ್ದನು. ಅಜ್ಜಿಯ ಮೇಲೆ ಅತ್ಯಾಚಾರ ಮಾಡುವುದು ಆತನ ಮೂಲ ಉದ್ದೇಶವಾಗಿತ್ತು. ಹಾಗಾಗಿ, ಮೊದಲಿಗೆ ಅಜ್ಜನನ್ನ ಕಲ್ಲಿನಿಂದ ಚಚ್ಚಿ, ಕೊಲೆ ಮಾಡಿ ನಂತರ ಅಜ್ಜಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಜ್ಜಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದಿದ್ದರಿಂದ ಆಕೆಯು ಸಾವನ್ನಪ್ಪಿದ್ದಳು ಎಂದು ತಿಳಿದು ಬಂದಿದೆ.

ಕೊಲೆಯಾದ ದಂಪತಿಗೆ ಮಕ್ಕಳಿರಲಿಲ್ಲ. ಮೃತ ಲಲಿತಮ್ಮನ ತಂಗಿಯ ಮೊಮ್ಮಗ ನಿಶಾಂತ್ (21) ಎಂಬ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಆತ ಅಜ್ಜ ಅಜ್ಜಿಯ ಬಳಿ ಒಡವೆ ಹಾಗೂ ಹಣವನ್ನೂ ಪಡೆದುಕೊಂಡು ಅಡವಿಟ್ಟಿದ್ದ. ಒಡವೆ ಬಿಡಿಸಿಕೊಡದ ಹಿನ್ನೆಲೆ ಆಗಾಗ ಗಲಾಟೆ ಕೂಡ ನಡೆಯುತ್ತಿತ್ತು. ಹಣಕ್ಕಾಗಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಪೊಲೀಸರು ಕೂಡ ಅದೇ ದೃಷ್ಟಿಕೋನದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಕೊಲೆಗೆ ಅಸಲಿ ಕಾರಣ ತಿಳಿದು ಪೊಲೀಸರು ಸಹ ಕಂಗಾಲಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *