Connect with us

KARNATAKA

ಚಿಕ್ಕಮಗಳೂರು:ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು, ಚಾಲಕ ಮೃತ್ಯು..!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ.

ರಂಜನ್ (38) ಮೃತ  ಚಾಲಕನಾಗಿದ್ದಾರೆ.  ಪ್ರಪಾತಕ್ಕೆ ಬಿದ್ದ ಪರಿಣಾಮ ಮಾರುತಿ-800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವ ಸಂದರ್ಭ ಅವಘಡ ಸಂಭವಿಸಿದೆ. ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಿದ್ದರೂ ಕ್ಯಾರೇ ಎನ್ನದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply