KARNATAKA
ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ಕಿಡಿಗೇಡಿಗಳಿಂದ ದಾಳಿ

ಚಿಕ್ಕಮಗಳೂರು, ಜೂನ್ 02: ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಹಾಗೂ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜು ಅವರ ಮನೆಯ ಮುಂದಿದ್ದ ಹೂವಿನ ಕುಂಡಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಇನ್ನೋವಾ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಪರಿಣಾಮ ಗಾಜು ಪುಡಿಪುಡಿಯಾಗಿದೆ.

ಅಲ್ಲದೆ ಕಾರಿನ ಬಾನೆಟ್, ಬಂಪರ್ ಒಡೆದು ಹಾಕಿ ರಾತ್ರೋರಾತ್ರಿ ಕಿಗೇಡಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕಡೂರು ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.