Connect with us

LATEST NEWS

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ – ಎರಡು ವರ್ಷ ಜೈಲು – ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಫೆಬ್ರವರಿ 17 : ಉಡುಪಿ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಅಂತವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.


ಮಣಿಪಾಲ್‌ನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.


ಜಿಲ್ಲೆಯಲ್ಲಿ ಹೆಚ್ಚಿನ ಜನ ಶಿಕ್ಷಣ ಹೊಂದಿ ಪ್ರಜ್ಞಾವಂತರಾಗಿದ್ದು, ಕಾನೂನಿನ ಅರಿವು ಹೊಂದಿ ಅದನ್ನು ಗೌರವಿಸಿ, ಪಾಲನೆ ಮಾಡುವಂತವರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳದೇ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು, ಬಾಲ ಕಾರ್ಮಿಕರನ್ನಾಗಿ ನಿಯೋಜಿಸಿಕೊಂಡಲ್ಲಿ ಅಂತವರಿಗೆ ಆರು ತಿಂಗಳಿಗಿಂತ ಕಡಿಮೆ ಇಲ್ಲದಂತೆ ಎರಡು ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ಯಿಂದ 50,000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದರು.

ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ವೃತ್ತಿಯನ್ನು ಅರಸಿ ಬರುವ ಕಾರ್ಮಿಕರು ತಮ್ಮ ಮಕ್ಕಳು ದುಡಿಮೆಗೆ ಹೋದಲ್ಲಿ ಹಣ ಗಳಿಸಬಹುದು ಎಂಬ ಮನೋಭಾವದಿಂದ ಸಣ್ಣ ಪುಟ್ಟ ಉದ್ಯೋಗಳಿಗೆ ಕಳುಹಿಸಲು ಮುಂದಾಗುತ್ತಾರೆ. ಇದಕ್ಕೆ ಕಡಿವಾಣ ಹಾಕಿ ಅವರುಗಳು ಶಾಲೆಗೆ ಹೋಗುವಂತೆ ಮಾಡಿ, ಶಿಕ್ಷಣವಂತರನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಮಿಕರು ತಂಗಲು ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳಾದ ಕುಡಿಯಲು ನೀರು, ಶೌಚಾಲಯ ಸೇರಿದಂತೆ ಮತ್ತಿತರ ಸೌಲಭ್ಯವನ್ನು ಕಲ್ಪಿಸುವ ಕಾರ್ಯವನ್ನು ಮಾಲೀಕರು ಮಾಡಿದಾಗ ಅವರುಗಳಿಂದ ಹೆಚ್ಚಿನ ದುಡಿಮೆಯನ್ನು ಮಾಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿಗೆ ಮಕ್ಕಳನ್ನು ದುಡಿಸಿಕೊಳ್ಳುವ ಎರಡು ಪ್ರಕರಣಗಳಿವೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಗಳಾಗದಂತೆ ಮಾಡುವ ಜವಾಬ್ದಾರಿ ಸಾರ್ವಜನಿಕರ ಹಾಗೂ ಅಧಿಕಾರಿಗಳ ಮೇಲಿದೆ ಎಂದರು.

ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮುಂಜಾನೆಯ ವೇಳೆಯಲ್ಲಿ ಹೊರ ಜಿಲ್ಲೆಯಿಂದ ಬಂದಿರುವ ಕಾರ್ಮಿಕರ ಮಕ್ಕಳು ಮೀನುಗಳನ್ನು ಆರಿಸುವ ಕೆಲಸ ಮಾಡುತ್ತಾರೆ. ಇದಕ್ಕೆ ಆಸ್ಪದ ನೀಡಬಾರದು, ಅಧಿಕಾರಿಗಳು ಆಗಿಂದ್ದಾಗೆ ಅನಿರೀಕ್ಷಿತ ಭೇಟಿ ಮಾಡಿ, ಇಂತಹ ಪ್ರಕರಣಗಳು ಕಂಡುಬAದಲ್ಲಿ ಅವರುಗಳ ಪೋಷಕರ ಗಮನಕ್ಕೆ ತಂದು ಪೂರ್ಣಪ್ರಮಾಣದಲ್ಲಿ ನಿಲ್ಲಿಸಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *