Connect with us

LATEST NEWS

ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಕುಂದಾಪುರ ಮೇ 26: ಕುಂದಾಪುರ ಪರಿಸರದಲ್ಲಿ ಹೆಸರು ಮಾಡಿರುವ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅವರು ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ,

ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಭೋಜಣ್ಣ ಅವರು‌ ಆತ್ಮಹತ್ಯೆ ಮಾಡಿಕೊಂಡಿದ್ದು, ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರಾಗಿದ್ದು, ಅವರ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply