Connect with us

    LATEST NEWS

    ಚಿತ್ರದುರ್ಗ: ಲಿಂಗಧೀಕ್ಷೆ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

    ಚಿತ್ರದುರ್ಗ, ಆಗಸ್ಟ್ 03: ಮುರುಘಾ ಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದ ವೇಳೆ ಅವರು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಲಿಂಗಧೀಕ್ಷೆ ನೀಡಿದ್ದಾರೆ.

    ಲಿಂಗಧೀಕ್ಷೆ ಪಡೆದುಕೊಂಡ ನಂತರ ನಮಗೆ ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು ಎಂದು ಮೂಲಗಳು ತಿಳಿಸಿವೆ.

    ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply