Connect with us

    LATEST NEWS

    ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂನ್ 13 ರಿಂದ ಪ್ರಾರ್ಥನೆಗೆ ಅವಕಾಶ

    – ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ

    ಮಂಗಳೂರು ಜೂ.6: ರಾಜ್ಯದ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅವಕಾಶ ನೀಡದ ಹಿನ್ನಲೆ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂನ್ 13 ರಿಂದ ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗುವುದು ಎಂದು ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇಂದು ಪತ್ರಿಕಾ ಪ್ರಕಟಣೆ ತಿಳಿಸಿದ ಅವರು ಮಂಗಳೂರು ನಗರದ ಧರ್ಮ ಪ್ರಾಂತ್ಯದ ಚರ್ಚ್​ಗಳಲ್ಲಿ ಜೂ. 13ರಿಂದ ಸರ್ಕಾರದ ನಿಯಮಾವಳಿಗಳಂತೆ ಬಲಿ ಪೂಜೆ, ಪ್ರಾರ್ಥನೆ ನೆರವೇರಿಸಲಾಗುವುದು. ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್, ಮಾಸ್ಕ್​​​​ಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಚರ್ಚ್ ಧರ್ಮಗುರುಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ

    ಈ ಕುರಿತು ಹೆಚ್ಚಿನ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *