LATEST NEWS
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ- ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ ಮಾರ್ಚ್ 20: ಇಡೀ ರಾಜ್ಯದಲ್ಲಿ ಸುದ್ದಿ ಮಾಡಿದ್ದ ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್ಗೆ ಸಿಐಡಿ ಡಿವೈಎಸ್ಪಿ ಅಂಜುಮಾಲಾರಿಂದ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
2023ರ ಜುಲೈ 18ರಂದು ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಘಟನೆ ನಡೆದಿತ್ತು. ಬಳಿಕ ಇದು ದೊಡ್ಡ ವಿವಾದವಾಗಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು.
ಬಳಿಕ ತನಿಖೆ ನಡೆಸಿದ ಸಿಐಡಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಹಿನ್ನಲೆ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login