Connect with us

    LATEST NEWS

    ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

    ಮಂಗಳೂರು ಡಿಸೆಂಬರ್ 19: ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ.


    ಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.

    Share Information
    Advertisement
    Click to comment

    You must be logged in to post a comment Login

    Leave a Reply