ಬಂಟ್ವಾಳ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ

ಬಂಟ್ವಾಳ ಡಿಸೆಂಬರ್ 9: ಬಂಟ್ವಾಳದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ವೇಳೆ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ನಡೆದಿದ್ದು, ಅಲ್ಲದೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಜಿ.ಪಂ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ಕೈ ಹಾಕಿ ದೂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಸ್ಥಳಿಯ ರಾಜಕೀಯ ಮೇಲಾಟದಿಂದ ಹಲವು ಬಾರಿ ಮುಂದೂಡಲ್ಪಟ್ಟ ಬಂಟ್ವಾಳದ ಇಂದಿರಾ ಕ್ಯಾಂಟಿನ್ ಉದ್ಘಾಟನೆಗೆ ಇಂದು ಮೂಹೂರ್ತ ಫಿಕ್ಸ್ ಆಗಿತ್ತು. ಸ್ಥಳಿಯ ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿಷ್ಟೆಯ ವಿಷಯವಾಗಿದ್ದ ಈ ಕ್ಯಾಂಟಿನ್ ಉದ್ಘಾಟನೆಗಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಬಿ. ರಮನಾಥ ರೈ, ಸ್ಥಳೀಯ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಅಹ್ವಾನಿಲಾಗಿತ್ತು.

ಆದರೆ ಉದ್ಘಾಟನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಜಟಾಪಟಿ ನಡೆದಿದು ವಿಕೋಪಕ್ಕೆ ಹೋಗಿದೆ. ಈ ಸಂದರ್ಭ ಜಿಪಂ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಚಂದ್ರಪ್ರಕಾಶ್ ಶೆಟ್ಟಿ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಸಂಸದ ನಳಿನ್ ಕುಮಾರ್, ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮ್ಮುಖದಲ್ಲೇ ಈ ಗೂಂಡಾಗಿರಿಯ ವರ್ತನೆ ನಡೆದಿದೆ ಎನ್ನಲಾಗಿದೆ.

ಇನ್ನು ಚಂದ್ರಪ್ರಕಾಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ತಾರಕಕ್ಕೇರಿ ನೂರಾರು ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ, ಮಾತಿನ ಚಕಮಕಿ ನಡೆದಿದೆ. ಗೂಂಡಾಗಿರಿ ನಡೆಸಿದ ಕಾರ್ಯಕರ್ತರ ಬಂಧನಕ್ಕೆ ಸಂಸದ ನಳಿನ್ ಸೂಚನೆ ನೀಡಿದ್ದಾರೆ. ಈ ಗದ್ದಲದ ನಡುವೆ ಸಚಿವ ಖಾದರ್ ಮತ್ತು ಸಂಸದ ನಳಿನ್ ಕುಮಾರ್ ತಳ್ಳಾಟದಲ್ಲಿ ಸಿಲುಕಿಕೊಳ್ಳುವಂತಾಯಿತು. ಬಂಟ್ವಾಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಬಿಗಿ ಪೋಲಿಸ್ ಬಂದೋಬಸ್ತ್ ಹಾಕಲಾಗಿದೆ.

VIDEO